ಪಾರ್ಕ್‌ನಲ್ಲಿರುವ ರೆಸ್ಟೋರೆಂಟ್‌ನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದೆ





ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಮಕ್ಕಳ ಆಟದ ಉದ್ಯಾನವನದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಪಾರ್ಕ್‌ನಲ್ಲಿರುವ ರೆಸ್ಟೋರೆಂಟ್‌ನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡ ಬಗ್ಗೆ. ಬೆಂಕಿಯಲ್ಲಿ ರೆಸ್ಟೋರೆಂಟ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಹರಸಾಹಸ ಪಟ್ಟು ಬೆಂಕಿಯನ್ನು ಹತೋಟಿಗೆ ತಂದಿದೆ. 1 ಕೋಟಿ ಮೌಲ್ಯದ ಸರಕು ಹಾನಿಯಾಗಿದೆ ಎಂದು ವರದಿಯಾಗಿದೆ. ಬೆಂಕಿಯ ಕಾರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.