ದಕ್ಷಿಣ ಆಫ್ರಿಕಾ ಮತ್ತು ಐರ್ಲೆಂಡ್ ನಡುವೆ 2 ಪಂದ್ಯಗಳು
ಅಬುಧಾಬಿಯಲ್ಲಿ ದಕ್ಷಿಣ ಆಫ್ರಿಕಾ ಮತ್ತು ಐರ್ಲೆಂಡ್ ನಡುವಿನ 2 ಪಂದ್ಯಗಳ T20I ಸರಣಿ ನಡೆಯುತ್ತಿದೆ. ಮೊದಲ ಟಿ20 ಪಂದ್ಯವನ್ನು ದಕ್ಷಿಣ ಆಫ್ರಿಕಾ ಗೆದ್ದಿದ್ದರೆ, 2ನೇ ಪಂದ್ಯ ನಿನ್ನೆ ರಾತ್ರಿ ನಡೆದಿದೆ. ಇದರಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ದುಕೊಂಡು ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 195 ರನ್ ಕಲೆಹಾಕಿತು. ರಾಸ್ ಆಡೈರ್ 58 ಎಸೆತಗಳಲ್ಲಿ 5 ಬೌಂಡರಿ ಮತ್ತು 9 ಸಿಕ್ಸರ್‌ಗಳೊಂದಿಗೆ 100 ರನ್ ಗಳಿಸಿದರು, ನಾಯಕ ಪಾಲ್ ಸ್ಟಿರ್ಲಿಂಗ್ 31 ಎಸೆತಗಳಲ್ಲಿ 52 ರನ್ ಗಳಿಸಿದರು.
ನಂತರ ಮೈದಾನಕ್ಕಿಳಿದ ದಕ್ಷಿಣ ಆಫ್ರಿಕಾ ತಂಡದಲ್ಲಿ ರೀಸಾ ಹೆಂಡ್ರಿಕ್ಸ್, ಮ್ಯಾಥ್ಯೂ ಬ್ರೀಟ್ಜ್ಕೆ ತಲಾ 51, ರಿಯಾನ್ ರಿಕಲ್ಟನ್ 36, ನಾಯಕ ಮಾರ್ಕ್ರಾಮ್ 8 ರನ್, ಟ್ರಿಸ್ಟಾನ್ ಸ್ಟಬ್ಸ್ 9 ರನ್ ಗಳಿಸಿ ಔಟಾದರು. ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 185 ರನ್ ಗಳಿಸಿತು. ಐರ್ಲೆಂಡ್ 10 ರನ್‌ಗಳ ಜಯ ಸಾಧಿಸಿತು. ಈ ಗೆಲುವಿನಿಂದ ಸರಣಿ 1-1ರಲ್ಲಿ ಸಮಬಲವಾಯಿತು. ರಾಸ್ ಆಡೈರ್ ಪಂದ್ಯಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು. ಮುಂದೆ 3 ಏಕದಿನ ಸರಣಿಯ ಮೊದಲ ಪಂದ್ಯ ಇದೇ 2ರಂದು ನಡೆಯಲಿದೆ.